Uncategorized

ಪಿಎಫ್ಐ ಮತ್ತು ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ದಾಳಿ 10 ಕ್ಕೂ ಹೆಚ್ಚು ಮುಖಂಡರು ವಶಕ್ಕೆ

ಹುಬ್ಬಳ್ಳಿ: ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಪಿಎಫ್ಐ ಮತ್ತು ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅದರಂತೆ ಧಾರವಾಡ ಜಿಲ್ಲೆಯಲ್ಲೂ 10 ಕ್ಕೂ ಹೆಚ್ಚು ಪಿಎಫ್ ಐ ಮತ್ತು ಎಸ್ ಡಿಪಿಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಧಾರವಾಡ ಜಿಲ್ಲೆಯಲ್ಲಿ ಹಳೇಹುಬ್ಬಳ್ಳಿಯ ಕಸಬಾಪೇಟೆ, ಕಲಘಟಗಿ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ. ಕಸಬಾಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 7 ಜನರನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಸಿಪಿಐ ರಮೇಶ ಗೋಕಾಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತಾಲೂಕಿನ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿ ಎಂಬಾತನನ್ನು ಸಿಆರ್ ಪಿಸಿ 107, 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಇನ್ನೂ ಪಿಎಫ್ ಐ ಮತ್ತು ಎಸ್ ಡಿಪಿಐ ಮುಖಂಡರ ಮನೆಯ ಮೇಲೆ ಎನ್ ಐಎ ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ ಪಿಎಫ್ ಐ ಕಾರ್ಯಕರ್ತರು ದಿಡೀರ್ ಪ್ರತಿಭಟನೆ ನಡೆಸಿ, ನಗರದಲ್ಲಿ ಕೆಲಕಾಲ ಶಾಂತಿ ಭಂಗಕ್ಕೆ ಕಾರಣವಾಗಿದ್ದರು. ಅಲ್ಲದೇ ಪ್ರತಿಭಟನೆ ವೇಳೆ ತಳ್ಳಾಟ ನುಕಾಟ ನಡೆಸಿದರು. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 51 ಜನರನ್ನು ಬಂಧಿಸಲಾಗಿದ್ದು, ಇದೀಗ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಪಿಎಫ್ ಐ ಕಾರ್ಯಕರ್ತರಾದ ಸಿಕಂದರ್ ಶಾಲಗಾರ್ ಹಾಗೂ ಫಾರೂಕ್ ಕಂಬಿ ಎಂಬುವವರನ್ನು ಸಿಆರ್ ಪಿಸಿ 107 ಅಡಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಇವರನ್ನು ಹೆಚ್ಚಿನ ವಿಚಾರಣೆಗೆ ಪೋಲಿಸರು ಒಳಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!