ಪೇಡಾ ನಗರಿಯಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.ನಗರದ ಜಿಲ್ಲಾ ಆಸ್ಪತ್ರೆ ಬಳಿ ಈ ಒಂದು ಘಟನೆ ನಡೆದಿದ್ದು ಜಿಲ್ಲಾ ಆಸ್ಪತ್ರೆ ಹತ್ತಿರ ಇರುವ ಸ್ಪರ್ಷ ಆಸ್ಪತ್ರೆ ಬಳಿ ಮಹಿಳೆಯೊಬ್ಬಳ ಮುಖದ ಮೇಲೆಯೇ ಕಲ್ಲೊಂದನ್ನು ಎತ್ತಿ ಹಾಕಿ ಹತ್ಯೆಯನ್ನು ಮಾಡಲಾಗಿದ್ದು ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಧಾರವಾಡ ಉಪನಗರ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ನಡೆಸಿದ್ದು.ಇನ್ನೂ ಕೊಲೆಯಾದ ಮಹಿಳೆ ಸವಿತಾ ಎಂಬುವರಾಗಿದ್ದು ಇವರ ಕುರಿತಂತೆ ಉಪನಗರ ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಕತ್ತಲೆ ಇರುವುದನ್ನ ನೋಡಿ ಕಲ್ಲು ಹಾಕಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಉಪನಗರ ಪೊಲೀಸರು ಜಾಲ ಬಿಸಿದ್ದು ಸಧ್ಯ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಪ್ರಾರಂಬಿಸಿದ್ದಾರೆ
