Uncategorized

ನ.30 ಮತ್ತು ಡಿ.1 ರಂದು ಬೃಹತ್ ಪುರುಷ ಸಂತಾನಹರಣ ಚಿಕಿತ್ಸಾ ಶಿಬಿರ

ಪುರುಷರಿಗಾಗಿ ಗಾಯವಿಲ್ಲದ, ಹೊಲಿಗೆಯಿಲ್ಲದ ಬೃಹತ್ ಪುರುಷ ಸಂತಾನಹರಣ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ.

ಸರ್ಕಾರದಿಂದ ರೂ.1,100 ಸಹಾಯಧನವನ್ನು ನೀಡಲಾಗುವುದು. ಸರ್ಕಾರಿ ನೌಕರರಾಗಿದ್ದಲ್ಲಿ ವಿಶೇಷ ಭತ್ಯೆಯನ್ನು ವೇತನದಲ್ಲಿ ಪಡೆದುಕೊಳ್ಳಬಹುದು. ನೋಂದಣಿಗಾಗಿ ದೂರವಾಣಿ ಸಂಖ್ಯೆ 94817 34230, 73539 21555, 98809 07064 ಸಂಪರ್ಕಿಸಬಹುದಾಗಿದೆ. ಆಸಕ್ತರು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಹುಬ್ಬಳ್ಳಿ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

error: Content is protected !!