ವ್ಯೆಕ್ತಿಯ ಮೇಲೆ ವಿನಾಕಾರಣ ಯುವಕರ ಗ್ಯಾಂಗ ಹಲ್ಲೆ ಮಾಡುತ್ತಿರು ದೃಶ್ಯ ಸಿ ಸಿ ಟಿವಿಯಲ್ಲಿ ಸೆರೆಯಾಗಿದೆ

ಹುಬ್ಬಳ್ಳಿ:
ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಗ್ಯಾಂಗ್ ವೊಂದು ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಯಲ್ಲಾಪುರ ಓಣಿಯ ಮೆಹಬೂಬ್ ನಗರದಲ್ಲಿ ನಡೆದಿದ್ದು, ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೈನೂ ಪೌಡಲ್ ಎಂಬಾತನ ಮೇಲೆ ಸಮೀರ್ ಎಂಬ ವ್ಯಕ್ತಿ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ.
ಇಲ್ಲಿನ ಮೆಹಬೂಬ್ ನಗರದಲ್ಲಿನ ಮೆಡಿಕಲ್ ಅಂಗಡಿ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಸಮೀರ್ ಹಾಗೂ ಆತನ ಸಹಚರರು ಸೇರಿ ಮೈನೂ ಮೇಲೆ ಮೂಗಿಗೆ ರಕ್ತ ಬರುವ ಹಾಗೇ ಹೊಡೆದು ಮನಬಂದಂತೆ ಹಲ್ಲೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಮೈನೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.
ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.