ನನ್ನ ವಿರುದ್ಧವೇ ಮುನೇನಕೊಪ್ಪ ಪರಾಭವಗೊಳ್ಳಲಿದ್ದಾರೆ. ಇದು ಶತಸಿದ್ಧ ಎಂದು ಬಹಿರಂಗವಾಗಿ ಸಾವಾಲೆಸೆದ ಕರಿಗಾರ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನಡೆಯಿಂದಾಗಿ ಬೇಸತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಕರಿಗಾರ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಚಗಳಿಂದ ನಾನು ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೆ, ಈ ಬಾರಿ ನನಗೆ ಟಿಕೆಟ್ ನೀಡುತ್ತೇನೆ ಎಂದು ಭರವಸೆ ನೀಡಿದ್ದರೂ ಆದರೆ, ಟಿಕೆಟ್ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದರು.
ಒಂದು ವೇಳೆ ನನಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ನಾನು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ಈ ಮೊದಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಗೆ ಎರಡು ಬಾರಿ ಆಯ್ಕೆಯಾಗಿದ್ದೇನೆ ಎಂದು ಹೇಳಿದರು.
ಈ ಹಿಂದೆ ಕಾಂಗ್ರೆಸ್ ಪಕ್ಷದ ಮುಖಂಡರು ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ಈದೀಗ ಅವರು ನೀಡಿದ ಭರವಸೆ ಹುಸಿಯಾಗಿದೆ. ಹೀಗಾಗಿ ಈ ನಿರ್ಣಯ ಕೈಗೊಂಡಿದ್ದೇನೆ. ಟಿಕೆಟ್ ರೇಸ್ ನಲ್ಲಿ ಎನ್.ಎಚ್. ಕೋನರಡ್ಡಿ ಹಾಗೂ ವಿನೋದ ಅಸೂಟಿ ಅವರ ಹೆಸರು ಹೈಕಮಾಂಡ್ ನಲ್ಲಿ ಕೇಳಿ ಬರುತ್ತಿದೆ. ನನ್ನನ್ನು ಪಕ್ಷದವರು ನಿರ್ಲಕ್ಷಿಸಿದ್ದಾರೆ ಎಂದು ಕಿಡಿ ಕಾರಿದರು.
ಏಪ್ರಿಲ್ ೧೩ ರಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ ಅವರು ಸ್ಪಷ್ಟಪಡಿಸಿದರು.
ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ನನ್ನ ವಿರುದ್ಧವೇ ಮುನೇನಕೊಪ್ಪ ಪರಾಭವಗೊಳ್ಳಲಿದ್ದಾರೆ. ಇದು ಶತಸಿದ್ಧ ಎಂದು ಬಹಿರಂಗವಾಗಿ ಸಾವಾಲೆಸೆದರು.