ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆ. ರಾಜಕೀಯ ದ್ವೇಷ ಅಥವಾ ಆಸ್ತಿ ವಿಚಾರಕ್ಕೆ ಈ ಕೊಲೆ?

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಭಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನನ್ನು ಭೀಕರವಾಗಿ ನಡು ರಸ್ತೆಯಲ್ಲಿ ಹತ್ಯೆ ಮಾಡಲಾಗಿದ್ದು ಇನ್ನು ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಭಗಡ ಗೇರಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದು
ಆಸ್ತಿ ವಿಚಾರದಲ್ಲಿ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇನ್ನು ಕೊಲೆ ನಡೆದ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಜಾಲ ಬೀಸಿದ್ದಾರೆ.
ಈ ಕೊಲೆ ಆಸ್ತಿ ಗಾಗಿ ನಡೆದಿದೆಯೋ ಅಥವಾ ರಾಜಕೀಯಕ್ಕಾಗಿ ನಡೆದಿದೆಯೋ ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ.