ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಬರ್ಬರ ಹತ್ಯೆ

ನಗರದ ಬಿವಿಬಿ ಕಾಲೇಜಿನಲ್ಲಿ ಪಾಲಿಕೆ ಸದಸ್ಯರಾದ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಎಂಬುವವರಿಗೆ ಚಾಕು ಇರಿದು ಹತ್ಯೆಗೈಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಅಲ್ಲದೇ ಚಾಕೂ ಇರಿತದಿಂದಾಗಿ ತೀವ್ರ ಗಾಯಗೊಂಡಿದ್ದ ಯುವತಿಯನ್ನ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ರವಾನಿಸಿದ್ದಾರೆ. ದುರಾದೃಷ್ಠವಶಾತ ಅದಾಗಲೇ ಯುವತಿ ಉಸಿರು ಚಲ್ಲಿದ್ದಾಗಿ ಹೇಳಲಾಗಿದೆ.
ಇನ್ನು ಬೇರೆ ಕಾಲೇಜೊಂದರಿಂದ ಬಂದಿದ್ದ ಪೈಜಲ ಯುವಕನೋರ್ವನಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಪೊಲೀಸರು ಅನುಮಾನದ ಮೇರೆಗೆ ಯುವನೋರ್ವನನ್ನು ಈಗಾಗಲೇ ಬಂಧಿಸಿದ್ದಾರೆ.

ಸಧ್ಯ ಸುದ್ದಿ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಘಟನಾ ಸ್ಥಳಕ್ಕೆ ದೌಡಾಯಿಸಿ ಘಟನೆಯ ಕುರಿತಾಗಿ ಮಾಹಿತಿ ಪಡೆದರು.