Uncategorized

ಉಣಕಲ್‌ ಕೆರೆಗೆ ಹಾರಿ ವಿದ್ಯಾರ್ಥಿನಿ‌ ಆತ್ಮಹತ್ಯೆ

ನಗರದ ಉಣಕಲ್‌ ಕೆರೆಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಮೃತಳನ್ನು
ಸವಣೂರ ತಾಲ್ಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ನರಗುಂದ (22) ಎಂದು ಗುರುತಿಸಲಾಗಿದೆ.

ಮೃತಳು ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದರು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು
ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಣಕಲ್ ಕೆರೆಯ ಉದ್ಯಾನದಲ್ಲಿ ವಾಯುವಿಹಾರ ಮಾಡುತ್ತಿದ್ದ ಸಾರ್ವಜನಿಕರು ಕೆರೆಯಲ್ಲಿ ಮೃತದೇಹ ತೇಲುತ್ತಿದ್ದನ್ನು ಗಮನಿಸಿ, ವಿದ್ಯಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಶವವನ್ನು ಹೊರೆತೆಗೆದು ಕಿಮ್ಸ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದರು.

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳವಾರ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!