ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹುಬ್ಬಳ್ಳಿಯ ಯುವಕ

ಗಣೇಶ ಹಬ್ಬಕ್ಕೆ ಬಂದ NTTF ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ
19 ವರ್ಷದ ಪ್ರಸಾದ್ ಎಂಬ ಯುವಕನೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂರನೇ ಸೆಮಿಸ್ಟರ್ NTTF ಓದುತ್ತಿದ್ದ ಪ್ರಸಾದ್.ವಿದ್ಯಾಭ್ಯಾಸದಲ್ಲಿ ಹಿಂದೆ ಇದ್ದ ಇನ್ನು ಎರಡನೇ ಸೆಮಿಸ್ಟರ್ ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಆಗಿದ್ದ ಪ್ರಸಾದ್ ಹೀಗಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಿನ್ನೆ ರಾತ್ರಿ ತಂದೆ ತಾಯಿ ಯೊಂದಿಗೆ ಊಟ ಮಾಡಿ ಮಲಗಿದ್ದ ಪ್ರಸಾದ್ ನಂತರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅನುಮಾನ ವ್ಯೆಕ್ತವಾಗಿದ್ದು. ಇನ್ನು ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾಹಿತಿ ಪಡೆಯುತ್ತಿದ್ದು ಇನ್ನು ಈ ಕುರಿತು ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಪ್ರಾರಂಬಿಸಿದ್ದಾರೆ