Uncategorized

ಕರ್ತವ್ಯ ಲೋಪ ಇನ್ಸಪೆಕ್ಟರ ಅಮಾನತು

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರ ಅಶೋಕ್ ಕುಮಾರ್ ನ್ನು ಅಮಾನತು ಮಾಡಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅಮಾನತು ಮಾಡಲಾಗಿದೆ.ಅಮಾನತು ಮಾಡಿ ಐಜಿಪಿ ಈ ಒಂದು ಆದೇಶವನ್ನು ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದ 52 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ.ಅಂಗಡಿಗಳು ಓಪನ್ ಆಗುತ್ತಿವೆ.ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ.ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ.52 ಜನರನ್ನು ವಶಕ್ಕೆ ಪಡೆಯಲಾಗಿದ್ದು ಇನ್ನೂಳಿದವರಿಗಾಗಿ ಶೋಧವನ್ನು ಮಾಡಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!