ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಗನ್ ಮಹಿಳಾ ಪಿ ಎಸ ಐ ಯಿಂದ ದರೋಡೆಕೋರನ ಕಾಲಿಗೆ ಗುಂಡು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದ್ದು, ದರೋಡೆಕೋರನೋರ್ವನ ಮೇಲೆ ಬೆಂಡಿಗೇರಿ ಠಾಣೆಯ ಪೊಲೀಸರು ಹುಬ್ಬಳ್ಳಿ ಹೊರವಲಯದಲ್ಲಿ ಗುಂಡಿನ ದಾಳಿ ಮಾಡಿದ್ದು, ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿದೆ.

ದರೋಡೆ ಪ್ರಕರಣದ ಆರೋಪಿ ವಿನೋದ್ ಕಾಲಿಗೆ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಆರ್. ನಾಯ್ಕ್ ಇವರ ನೇತೃತ್ವದ ತಂಡ ದರೋಡೆಕೋರನ ಮೇಲೆ ದಾಳಿ ನಡೆಸಿದ್ದಾರೆ.
ಆರೋಪಿಯ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ.

ಹುಬ್ಬಳ್ಳಿ ಹೊರವಲಯದಲ್ಲಿನ ತಾರಿಹಾಳದ ಬಳಿಯಲ್ಲಿ ಸ್ಥಳ ಮಹಜರ್ ಮಾಡುವ ಸಂದರ್ಭದಲ್ಲಿ ಪೊಲೀಸರ ಮೇಲೆ ಆರೋಪಿಯು ಪಿಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಚಲುವಾದಿ ಆತ್ಮ ರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ರು ಕೂಡಾ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ ಈ ಸಂದರ್ಭದಲ್ಲಿ ಪಿಎಸ್ಐ ಜಯಶ್ರೀ ಸೇರಿದಂತೆ ಮೂವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲಿಸ್ ಆಯುಕ್ತರಾದ ಎನ್ ಶಶಿಕುಮಾರ್ .ಹಾಗು ಡಿಸಿಪಿಗಳು ಸಿಬ್ಬಂದಿಗಳ ಆರೋಗ್ಯವನ್ನು ವಿಚಾರಿಸಿ ಅವರ ಕಾರ್ಯಾಚರಣೆಗೆ ಶ್ಲಾಘಿಸಿದ್ದಾರೆ