ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ

ಹುಬ್ಬಳ್ಳಿ ಲ್ಯಾಮಿಂಗ್ಟನ ರಸ್ತೆಯಲ್ಲಿ ಸಂಜೆ
ಚಲಿಸುತ್ತಿದ್ದ ಕಾರಿನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡು ವಾಹನದಲ್ಲಿ ಇದ್ದ ಪ್ಯಾಮಿಲಿ ಕೆಲ ಕಾಲ ಆತಂಕಗೊಂಡಿದ್ದು ಕಂಡು ಬಂದಿತು.
ಗಣೇಶಪೇಟೆಯಿಂದ ಗೋಕುಲ ರಸ್ತೆ ಕಡೆಗೆ ತೆರಳುತ್ತಿದ್ದ ಇಂಡಿಗೋ ಕಾರಿನಲ್ಲಿ ಏಕಾ ಏಕಿ ಹೊತ್ತಿಕೊಂಡ ಬೆಂಕಿಯಿಂದ ಕೆಲಕಾಲ ಆತಂಕ ಸೃಷ್ಠಿ ಆಗಿತ್ತು.
ಇನ್ನು ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಕಾರಿನಲ್ಲಿ ಹೊತ್ತಿಕೊಂಡ ಬೆಂಕಿಯುಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಕಾರಿನಿಂದ ಹೊರಬಂದ ಕುಟುಂಬಸ್ಥರು ಇದನ್ನು ನೋಡಿದ ಕೂಡಲೇ ಹೊತ್ತಿಕೊಂಡ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದಾರೆ
ಸ್ಥಳೀಯರ ಸಮಯ ಪ್ರಜ್ಞೆಯಿಂದ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದ್ದೆ.