ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಬೈಕ ಸವಾರನ ಮೇಲೆ ಹಲ್ಲೆ

ಹುಬ್ಬಳ್ಳಿ: ಬೈಕ್ ಸವಾರನನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪ್ರಶಾಂತ ಎಂಬಾತನ ಮೇಲೆಯೇ ಹಲ್ಲೆಯಾಗಿದ್ದು, ಈತ ತನ್ನ ಬೈಕ್ ಮೇಲೆ ಹೆಗ್ಗೇರಿಯ ಕೇಶನಪುಂಜದ ಹತ್ತಿರ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರಿನವರು, ಕ್ಷುಲ್ಲಕ ವಿಚಾರಕ್ಕೆ ತಂಟೆ ತೆಗೆದಿದ್ದಾರೆ.
ಈ ವೇಳೆ ಮಾತಿಗೆ ಮಾತು ಬೆಳೆದು ಪ್ರಶಾಂತ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಬೈಕ್ ಸವಾರ ಪ್ರಶಾಂತನಿಗೆ ಗಂಭೀರವಾಗಿ ಹಲ್ಲೆಯಾಗಿದ್ದು, ಬಳಿಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸದ್ಯ ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.