Uncategorized

ಐದು ಜನ ಬೀದಿ ಕಾಮಣ್ಣರನ್ನು ಹೆಡೆಮುರಿ ಕಟ್ಟಿದ ಹಳೆ ಹುಬ್ಬಳ್ಳಿ ಪೊಲೀಸರು

ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯೊರ್ವಳನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಘಟನೆ ನಡೆದ ಎರಡು ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಹಳೇಹುಬ್ಬಳ್ಳಿಯ ಅಯೋಧ್ಯೆ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್ ಹಿತ್ತಲಮನಿ, ಈ ಆರೋಪಿಗಳಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಎಂಬಾರನ್ನು ಬಂಧಿಸಲಾಗಿದೆ.

ಬಂಧಿತರಿಂದ ಆರು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಶುಭಂ ತಡಸ ಎಂಬಾತನ ವಿರುದ್ಧ ಕಸಬಾಪೇಟೆ ಮತ್ತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿವೆ. ಸಾಗರ ಸಾತಪುತೆ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಸಚಿನ ನರೇಂದ್ರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.‌

ಸದ್ಯ ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಎಚ್.ಯಳ್ಳುರ, ಪಿಎಸ್ಐ ರುದ್ರಪ್ಪ ಗುಡದರಿ, ಎಎಸ್ಐ ಪಿ.ಬಿ.ಕಾಳೆ ಮತ್ತು ಸಿಬ್ಬಂದಿಗಳಾದ ಫಕ್ಕಿರೇಶ ಗೊಬ್ಬರಗುಂಪಿ, ಅಭಯ ಕಟ್ನಳ್ಳಿ, ನಾಗರಾಜ್ ಕೆಂಚಣ್ಣನವರ, ಕೃಷ್ಣಾ ಮೋಟೆಬೆನ್ನೂರ, ಸಂತೋಷ ವಲ್ಯಾಪೂರ, ರಮೇಶ ಹಲ್ಲೆ, ಕಲ್ಲನಗೌಡ ಗುರನಗೌಡ, ವಿಠಲ ಹೊಸಳ್ಳಿ, ಜಗದೇಶ ಗೌಂಡಿ ಸೇರಿದಂತೆ ಮುಂತಾದವರು ಇದ್ದಾರೆ.

Leave a Reply

Your email address will not be published. Required fields are marked *

error: Content is protected !!