ಸಿದ್ದಾರೂಢ ಮಠದ ಹತ್ತಿರ ದರೋಡೆ ಮಾಡಿದ್ದ ಇಬ್ಬರನ್ನು ಬಂಧಿಸಿದ ಇನ್ಸಪೆಕ್ಟರ ಸುರೇಶ ಯಳ್ಳೂರ್ ಆಂಡ್ ಟೀಮ್

ಹುಬ್ಬಳ್ಳಿಯ ಸಿದ್ದಾರೂಢ ಮಠದ ಹತ್ತಿರ ಟ್ರಾಕ್ಟರ್ ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರನ್ನ ಬೆದರಿಸಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ಹಣವನ್ನು ಮತ್ತು ಟ್ರಾಕ್ಟರ್ ಟೂಲ್ ಕಿಟ್ ನ್ನು ದೋಚಿಕೊಂಡು ಪರಾರಿಯಾಗಿದ್ದರ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನೂ ಆರೋಪಿಗಳ ಬಂಧನಕ್ಕಾಗಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸೆಕ್ಟರ್ ಎಸ್ ಎಚ್ ಯಳ್ಳೂರ ತಂಡವನ್ನು ರಚಿಸಿದ್ದರು. ಇನ್ನು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿ ಆಗುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

32 ವಯಸ್ಸಿನ ಅಷ್ಟಕ್ ಪೀರಜಾದೆ, ಮತ್ತು 19 ವಯಸ್ಸಿನ ಇಸ್ಮಾಯಿಲ್ ಬಿಸ್ತಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 12,580/- ರೂ ನಗದು ಮತ್ತು ಟ್ರಾಕ್ಟರ್ ಟೂಲ್ ಕಿಟ್ ನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.ಆರೋಪಿಗಳ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸುತ್ತಾರೆ.
ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ.