ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಯೋಧ್ಯೆ ನಗರದ ವಾಟರ್ ಟ್ಯಾಂಕ್ ಬಳಿ ನಡೆದಿಸೆ.
ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾರುತಿ ಎಂದು ಗುರುತಿಸಲಾಗಿದ್ದು ಈತ ಅಂಬೇಡ್ಕರ್ ಕಾಲೊನಿಯ ನಿವಾಸಿಯಾಗಿದ್ದಾನೆ. ಸಾಯಂಕಾಲ ವಾಟರ್ ಟ್ಯಾಂಕ್ ಬಳಿ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕುವಿನಿಂದ ಇರಿಯಿವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಮಾರುತಿಯನ್ನು ಆತನ ಸಹೋದರ ಅಶೋಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿಯನ್ನು ಪಡೆದಿದ್ದಾರೆ.