Uncategorized

ಮೀಟರ್ ಬಡ್ಡಿ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಿದ್ದಪ್ಪ

ವ್ಯಕ್ತಿಯೊರ್ವ ಬಡ್ಡಿ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಸಿದ್ದಪ್ಪ ಕೆಂಚಣ್ಣವರ (42) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ ಉಣಕಲ್ ದುರ್ಗಮ್ಮನ ಓಣಿ ನಿವಾಸಿಯಾಗಿದ್ದಾನೆ.

ಈತ ಮನೆಯಲ್ಲಿ Death Note ಬರೆದಿಟ್ಟು ಹುಬ್ಬಳ್ಳಿ ಹೊರವಲಯದ ಧಾರಾವತಿ ಆಂಜನೇಯ ದೇವಸ್ಥಾನದ ಬಳಿಯಲ್ಲಿ ಲಾರಿ ಚಕ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೃತ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನೂ ಡೆತ್‌ ನೋಟ್’ನಲ್ಲಿ ಮೃತ ಸಿದ್ದಪ್ಪ ತಾನು ಬಡ್ಡಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾನೆ. ತನಗೆ ಮಹೇಶ ಚಿಕ್ಕವೀರಮಠ ಎಂಬಾತ 10 ಲಕ್ಷ ಸಾಲ ನೀಡಿ ಅದಕ್ಕೆ ಪ್ರತಿಯಾಗಿ 65 ಲಕ್ಷ ಹಣವನ್ನು ಬಡ್ಡಿ ರೂಪದಲ್ಲಿ ಕೊಟ್ಟಿದ್ದೇನೆ. ಅಷ್ಟಾಗ್ಯೂ ಕೂಡಾ ಹಣಕ್ಕಾಗಿ ಪೀಡಿಸುತ್ತಿದ್ದ, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ.

ಸದ್ಯ ಸಿದ್ದಪ್ಪ ಕೆಂಚಣ್ಣವರ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯಿಂದ ಇನ್ನಷ್ಟೇ ನಿಖರವಾದ ಮಾಹಿತಿ ತಿಳಿದುಬರಬೇರಬೇಕಿದೆ.

Leave a Reply

Your email address will not be published. Required fields are marked *

error: Content is protected !!