ಹುಬ್ಬಳ್ಳಿ ಧಾರವಾಡದಲ್ಲಿ ಯಾರ ಭಯ ಇಲ್ಲದೆ ಅಕ್ರಮ ಮರಳು ಸಾಗಾಟ ಜೋರಾಗಿದೆ

ಹುಬ್ಬಳ್ಳಿ-ಧಾರವಾಡದಲ್ಲಿ ವ್ಯಾಪಕವಾಗಿ ಅಕ್ರಮ ಮರಳು ಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ.
ಹಿಂದಿನಿಂದಲೂ ವಾಣಿಜ್ಯ ನಗರದಲ್ಲಿ ಮನೆ, ಕಟ್ಟಡ ಸೇರಿದಂತೆ ಇನ್ನಿತರ ನಿರ್ಮಾಣ ಕಾಮಗಾರಿಗಳಿಗೆ ವಿವಿಧ ಜಿಲ್ಲೆಗಳಿಂದ ಮರಳು ಸಾಗಾಟ ಹೆಚ್ಚಿದ್ದು, ಇದರಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಮರಳನ್ನು ಅಕ್ರಮದ ಮೂಲಕವೇ ಸಾಗಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹೊಳೆ ಆಲೂರು, ಬಾದಾಮಿ ಹಾಗೂ ಹಾವೇರಿ ಜಿಲ್ಲೆಗಳಿಂದ ಅಕ್ರಮವಾಗಿ ಮರಳು ತೆಗೆದು ಅದನ್ನು ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡಕ್ಕೆ ದುಪ್ಪಟ್ಟು ದರಕ್ಕೆ ಮಾರಾಟ ಮಾಡತ್ತಾರೆ. ಹೀಗೆ ಅಕ್ರಮ ಮರಳನ್ನು ಬೇರೆ ಬೇರೆ ಮಾರ್ಗಗಳ ಮೂಲಕ ಸಾಗಾಟ ಮಾಡಲಾಗುತ್ತದೆ. ಅಷ್ಟಾದರೂ ಸಹಿತ ಪೊಲೀಸ್ ಇಲಾಖೆ ಹಲವೆಡೆ ಮರಳು ಸಹಿತ ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸುತ್ತಿದ್ದಾರೆ. ಆದ್ರೆ ದಂಧೆ ಮಾತ್ರ ಯಾರ ಭಯವಿಲ್ಲದೇ ಮುಂದುವರೆಯುತ್ತಿದೆ.
ಇನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಪರವಾನಗಿ ದಾಖಲೆ, ರಾಜಸ್ವ ದಾಖಲೆ, ಜಿಪಿಎಸ್ ಅಳವಡಿಕೆ ಸಹಿತ ಗಣಿ ಇಲಾಖೆಗೆ ಸಂಬಂಧಿಸಿದ ಮೊದಲಾದ ಕಾನೂನು ಕ್ರಮಗಳನ್ನು ವಾಹನಗಳು ಪಾಲಿಸುತ್ತಿಲ್ಲ.
ಇನ್ನು ಕೊಪ್ಪಳ ದಿಂದ ಪಾಸ ಇಲ್ಲದೆ No ENTRY ಅಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಚೆನ್ನಮ್ಮ ವೃತ್ತದಲ್ಲಿ ತಡೆದು ಸಂಚಾರಿ ಪೊಲೀಸರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೇ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಓವರ್ ಲೋಡ್ ಸಾಮಾನ್ಯ ಎನಿಸಿ ಬಿಟ್ಟಿದೆ.
ಹೀಗಾಗಿ ಖಡಕ್ ಪೋಲೀಸ್ ಆಯುಕ್ತ ಎನ್.ಶಶಿಕುಮಾರ್ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕುವ ಕೆಲಸ ಮಾಡಬೇಕಿದೆ.
ಅದರಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸಹಿತ ನಾಮಕಾವಸ್ಥೆಗೆ ದಾಳಿ ಮಾಡಿ ಪ್ರಕರಣವನ್ನು ದಾಖಲಿಸುವ ಬದಲು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.