Uncategorized

ಹುಬ್ಬಳ್ಳಿಗೆ ಆಗಮಿಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಖಾಸಗಿ ಹೋಟೆಲನಲ್ಲಿ‌ ಸಭೆ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸುಮಾರು ನಾಲ್ಕೈದು ವರ್ಷಗಳ ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾರ, ಶಾಲು ಹಾಕಿ ವಿಜೃಂಭಣೆಯಿಂದ ಬರಮಾಡಿಕೊಂಡರಲ್ಲದೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.

ಇನ್ನೂ ಕಾಂಗ್ರೆಸ್ ಕಾರ್ಯಕರ್ತರು ಭವಿಷ್ಯದ ನಾಯಕ, ಮುಂದಿನ ಪ್ರಧಾನಮಂತ್ರಿ ರಾಹುಲ್ ಗಾಂಧಿಯವರಿಗೆ ಜಯವಾಗಲಿ ಎಂದು ಹರ್ಷೋದ್ಘಾರ ಕೂಗಿದರು.

ರಾಹುಲ್ ಗಾಂಧಿಯವರು ಆಗಮಿಸುತ್ತಿದ್ದಂತೆ ಸಾಕಷ್ಟು ಕಾಂಗ್ರೆಸ್ ನಾಯಕರು ಜಮಾವಣೆಗೊಂಡ ಪರಿಣಾಮ ನೂಕುನುಗ್ಗಲು ಉಂಟಾಯಿತು. ಈ ಹಿನ್ನಲೆಯಲ್ಲಿ ಕಾರ್ಯಕರ್ತರನ್ನು ನಿಭಾಯಿಸುವಲ್ಲಿ ಪೊಲೀಸರು ಪರದಾಡಿದರು. ಇನ್ನೂ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ರಾಹುಲ್ ಗಾಂಧಿಯವರು ಖಾಸಗಿ ಹೋಟೆಲ್ ನತ್ತ ಸಾಗಿದರು.

ಬಹು ದಿನಗಳ ಆಗಮಿಸಿದ ರಾಹುಲ್ ಗಾಂಧಿಯವರು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದು, ಖಾಸಗಿ ಹೊಟೇಲ್ ನಲ್ಲಿ ರಾಜಕೀಯ ಬೆಳವಣಿಗೆ ಸಂಬಂಧಿಸಿದಂತೆ ಪ್ರಥಮ ಬಾರಿಗೆ ಐತಿಹಾಸಿಕ ಸಭೆ ನಡೆಸಿ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಕುತೂಹಲ ಮೂಡಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆಯ ಕುರಿತು ಚರ್ಚೆ ನಡೆಸಿದ್ದು

ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನ ಬಲಿಷ್ಠ ಸಂಘಟನೆ ಕುರಿತು ಹೆಚ್ಚಿನ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!