ಎಸ್ ಡಿ ಪಿಐ ಹಾಗು ಪಿ ಎಪ್ ಐ ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ

ಹುಬ್ಬಳ್ಳಿ: ಎಸ್ ಡಿಪಿಐ ಮತ್ತು ಪಿಎಫ್ ಐ ಮುಖಂಡರ ಮೇಲೆ NIA ದಾಳಿ ಮಾಡಿದ್ದರಿಂದ ಇಂದು ಹುಬ್ಬಳ್ಳಿಯಲ್ಲಿ ಎಸ್ ಡಿಪಿಐ ಮತ್ತು ಪಿಎಫ್ ಐ ಕಾರ್ಯಕರ್ತರು ಕೌಲ್ ಪೇಟೆಯ ಹತ್ತಿರ ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು
ಈ ಇನ್ನು ಗೋ ಬ್ಯಾಕ್ ಎನ್ ಐಎ ಗೋ ಬ್ಯಾಕ್ ಎನ್ ಐಎ ಎಂದು ಘೋಷಣೆ ಕೂಗಿ ಕೈಯಲ್ಲಿ ಎಸ್ ಡಿ ಪಿ ಐ ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಯಿತು
ಇನ್ನು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಎಸಿಪಿ ಹಾಗು ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದು. ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸ್‌ರನ್ನ ನಿಯೋಜಿಸಿಲಾಗಿದೆ. ಪ್ರತಿಭಟನಾ ನಿರತರ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಬುರಾಮ ಹೇಳಿದರು.